ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ವ್ಯಕ್ತಿಯಬ್ಬನ ಮೇಲೆ ಇಬ್ಬರು ದಾಳಿ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿದ್ಯಾನಗರ ಸಿದ್ದೇಶ್ವರ ಪಾರ್ಕ್ ಹತ್ತಿರದ ಬನಶಂಕರಿ ಬಡಾವಣೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬೀಳಿಸಿದ ಹಂತಕರು ಮಚ್ಚಿನಿಂದ ಮನಬಂದಂತೆ ಕೊಚ್ಚಿ ಸಾರ್ವಜನಿಕವಾಗಿ ಕೊಲೆ ಮಾಡಿದ್ದಾರೆ.
ಕೊಲೆ ಮಾಡುತ್ತಿರುವ ದೃಶ್ಯ ಅನೇಕರ ಮೊಬೈಲ್ ಗಳಲ್ಲಿ ಸೆರೆಯಾಗಿದೆ. ಕೆಳಗೆ ಬಿದ್ದ ವ್ಯಕ್ತಿಯನ್ನು ಅತ್ಯಂತ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಸಧ್ಯಕ್ಕೆ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗುತ್ತಿಲ್ಲ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.



