ಪ್ರಜಾಸ್ತ್ರ ಸುದ್ದಿ
ಹೊಸಕೋಟೆ(Hosakote): ದೊಡ್ಡ ಹೊಲ್ಲೂರು ಹತ್ತಿರದ ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಸುಕಿನಜಾವ ಸುಮಾರು 3 ಗಂಟೆ ವೇಳೆಯಲ್ಲಿ ಕಾರೊಂದು ಅಪಘಾತವಾಗಿದೆ. ಕಾರಿನಲ್ಲಿದ್ದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಯುವಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಶಹಜೀಯಾ ಶೇಕ್(28) ಮೃತ ಯುವತಿ ಎಂದು ತಿಳಿದು ಬಂದಿದೆ.
ಮರ್ಸಿಡಿಸ್ ಬೆಂಜ್ ಕಾರಿನ್ಲಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿ ದೇವನಹಳ್ಳಿ ಮಾರ್ಗದಿಂದ ಹೊಸಕೋಟೆ ಕಡೆ ವೇಗವಾಗಿ ಹೊರಟಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಕಾರು ಚಾಲಕ ರಿಜ್ವಾನ್ ಸ್ಥಳದಿಂದ ಪರಾರಿಯಾಗಿದ್ದು, ಹೊಸಕೋಟೆ ನಗರ ಸಂಚಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.



