LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿ ಆತ್ಮಹತ್ಯೆ, ಅಪಘಾತದಲ್ಲಿ ಪತಿ ಸಾವು

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಇದು ಅತ್ಯಂತ ಕರುಣಾಜನಕ ಕಥೆಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಕೊಂಡಿದ್ದಾಳೆ. ಆಕೆಯನ್ನು ನೋಡಲು ಬರುತ್ತಿದ್ದ ಪತಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಇಂತಹದೊಂದು ಮನಕಲಕುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ(30) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಕರೆಪ್ಪ ಗಂಗಪ್ಪ ಮಾದರ(36) ಅಪಘಾತದಲ್ಲಿ ಮೃತಪಟ್ಟ ಪತಿ.

9 ವರ್ಷಗಳ ಹಿಂದೆ ಇವರಿಗೆ ಮದುವೆಯಾಗಿದೆ. ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಧುರಾ ಮಾನಸಿಕವಾಗಿ ನೊಂದಿದ್ದರು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ವಿಚಾರ ತಿಳಿದು ಪತಿ ಕರೆಪ್ಪ ಬೈಕ್ ನಲ್ಲಿ ಆಸ್ಪತ್ರೆಗೆ ಬರುತ್ತಿದ್ದಾಗ ಅರವಳ್ಳಿ ಕ್ರಾಸ್ ಹತ್ತಿರ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೀಗೆ ಒಂದೇ ದಿನ ಪತಿ, ಪತ್ನಿ ಮೃತಪಟ್ಟಿದ್ದು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೂರು ಪುಟ್ಟ ಮಕ್ಕಳು ಅನಾಥವಾಗಿವೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST