LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ತಪ್ಪುಗಳನ್ನು ನಾನು ಖಂಡಿಸುತ್ತೇನೆ: ಸಚಿವ ಎಂ.ಬಿ ಪಾಟೀಲ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಕ್ಫ್ ಆಸ್ತಿ ವಿಚಾರದಲ್ಲಿ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಉಂಟು ಮಾಡಿದೆ. ಬಿಜೆಪಿ ರಾಜ್ಯ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ. ಪ್ರತಿಭಟನೆ, ಧರಣಿಗಳನ್ನು ನಡೆಸುತ್ತಿದೆ. ಈ ಬಗ್ಗೆ ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಮಾತನಾಡಿದ್ದು, ರಾಜ್ಯದಲ್ಲಿ ವಕ್ಫ್ ವಿವಾದಕ್ಕೆ ಬಿಜೆಪಿ ಕಾರಣ. ವಕ್ಫ್ ನಿಂದಲೂ ಸಾಕಷ್ಟು ತಪ್ಪುಗಳಾಗಿವೆ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 1974 ವಕ್ಫ್ ಗೆಜೆಟ್ ರದ್ದು ಪಡಿಸಬೇಕು ಎಂದು ಹೇಳುತ್ತಿರುವ ಬಿಜೆಪಿ 10 ವರ್ಷ ಆಡಳಿತದಲ್ಲಿದ್ದಾಗ ಮಲಗಿತ್ತಾ ಎಂದು ಪ್ರಶ್ನಿಸಿದರು. ಯಾವುದೇ ಧರ್ಮ, ಶಾಲಾ, ಕಾಲೇಜು ಹಾಗೂ ಯಾವ ರೈತ ಜಮೀನಿಗಳನ್ನು ಕಿತ್ತುಕೊಳ್ಳುವುದಿಲ್ಲ. ರೈತರಲ್ಲಿ ಬಿಜೆಪಿ ಗೊಂದಲು ಮೂಡಿಸುತ್ತಿದೆ. ಆದರೆ, ಬಿಜೆಪಿಯ ಪ್ರಣಾಳಿಕೆಯಲ್ಲಿಯೇ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST