ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿ ಮಾತನಾಡಿದ ಸಿದ್ದರಾಮಯ್ಯನವರು, ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ಈ ಹಿಂದೆನೆ ಹೇಳಿದ್ದೆ. ರಾಜ್ಯಸಭಾ ಸದಸ್ಯರಾಗುವಂತೆ ಹೈಕಮಾಂಡ್ ಕೇಳಿತು. ನಾನು ವಿನಮ್ರವಾಗಿ ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದ್ದೇನೆ ಎಂದರು.
ಜನ ಐದು ವರ್ಷ ಆಯ್ಕೆ ಮಾಡಿದ್ದಾರೆ. ಇನ್ನು ಎರಡು ವರ್ಷ ಇದೆ. ಕ್ಷೇತ್ರದ ಜನರ ಸೇವೆ ಮಾಡುತ್ತಾನೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ನನ್ನ ಕೊನೆಯ ಉಸಿರು ಇರುವ ತನಕ ಕೋಮುವಾದದ ವಿರುದ್ಧ ಹೋರಾಡುತ್ತಾನೆ. ಸಂವಿಧಾನದ ವಿರುದ್ಧ ಯಾರೆ ಇದ್ದರೂ ಹೋರಾಡುತ್ತೇನೆ. ಸಂವಿಧಾನದಿಂದಾಗಿಯೇ ನಾನು ಶಾಸಕ, ಸಚಿವ, ಮುಖ್ಯಮಂತ್ರಿ ಆಗಲು ಸಾಧ್ಯವಾಗಿದ್ದು ಅಂತಾ ಹೇಳಿದರು.



