LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಪಾಠ: ಆರ್.ಅಶೋಕ್

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಾಗಮಂಗಲ ಗಲಭೆ(Violence) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ. ಉತ್ತರ ಪ್ರದೇಶದ(UP) ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತಿ ಮನಸ್ಥಿತಿಗೆ ಪೂರ್ಣ ವಿರಾಮ ಇಡಲು ಸಾಧ್ಯ ಎಂದಿದ್ದಾರೆ.

ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟುಗಳು, ಸರುಕು ಸರಂಜಾಮುಗಳು ಸೇರಿದಂತೆ ಒಟ್ಟು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್(Petrol Bomb) ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ತಕ್ಕ ಪಾಠ ಕಲಿಸಲು ಸಾಧ್ಯ ಅಂತಾ ಬರೆದಿದ್ದಾರೆ.

ಸರ್ಕಾರ ಈಗ್ಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಎಂಬುವುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ. ನಾಗರಿಕರನ್ನು ರಕ್ಷಣೆ ಮಾಡಬೇಕಾದ ಸರ್ಕಾರವೇ ಇಂತಹ ಪೂರ್ವನಿಯೋಜಿತ ಕೋಮುಗಲಭೆಗಳನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು. ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST