ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಇಂಡಿ ಉಪನೋಂದಣಿ ಕಚೇರಿ ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದಾರೆ. ಈ ವೇಳೆ ಲೆಕ್ಕಕ್ಕೆ ಸಿಗದ 50 ಸಾವಿರ ರೂಪಾಯಿ ನಗದು ಪತ್ತೆಯಾಗಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶಿ ಹಾಗೂ ಡಿವೈಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ಕಚೇರಿಯಲ್ಲಿ ಖಾಸಗಿ ವ್ಯಕ್ತಿಗಳು ಕಂಡು ಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಲೋಕಾಯುಕ್ತ ಸಿಪಿಐಗಳಾದ ಆನಂದ ಟಕ್ಕನವರ ಹಾಗೂ ಆನಂದ ಡೊಣ್ಣಿ ಅವರೊಂದಿಗೆ ಕೆಲ ಸಾರ್ವಜನಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ.



