ಪ್ರಜಾಸ್ತ್ರ ಸುದ್ದಿ
ಕಠ್ಮಂಡು(Katmandu): ನೇಪಾಳ ಹಾಗೂ ಟಿಬೆಟ್ ಗಡಿಯ ಸುತ್ತಲಿನ ಪ್ರದೇಶದಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಇದರಿಂದಾಗಿ 130ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಭಾರತದ ಹಲವು ರಾಜ್ಯಗಳು ನೂರಾರು ಪ್ರವಾಸಿಗರು ನೇಪಾಳಕ್ಕೆ ಹೋದವರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಇದರಲ್ಲಿ ಕನ್ನಡಿಗರು ಸಹ ಇದ್ದಾರೆ ಎಂದು ತಿಳಿದು ಬಂದಿದೆ. ಅವರ ಮಾಹಿತಿ ಸಂಗ್ರಹಿಸುವ ಕೆಲಸ ನಡೆದಿದೆ.
ವಿಪತ್ತು ನಿರ್ವಹಣೆ ಸಚಿವಾಲಯ(ಕಂದಾಯ ಇಲಾಖೆ) ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಸಂಕಷ್ಟದಲ್ಲಿ ಸಿಲುಕಿರುವ ಪ್ರವಾಸಿಗರು, ಸಂಬಂಧಿಕರು, ಪ್ರವಾಸ ಆಯೋಜಕರು ಗೂಗಲ್ ಫಾರ್ಮ್ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ನೇಪಾಳ ಹಾಗೂ ಬೀಜಿಂಗ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕ ಸಾಧಿಸಿ ರಕ್ಷಣೆ ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 080-22253707, [email protected] ಗೆ ಮಾಹಿತಿ ನೀಡಬಹುದು.



