ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನೂತನ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ ಸಂಬಂಧ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವಾಮೀಜಿಗಳಿಗೆ, ಮೌಲ್ವಿಗಳಿಗೆ, ಫಾದರ್ ಗಳಿಗೆ ಆಹ್ವಾನ ನೀಡಲಾಗಿದೆ. ನಿಯೋಜಿತ ಸಿಎಂ ಸೂಚನೆ ಮೇರೆಗೆ ಸರ್ಕಾರದಿಂದಲೇ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಲೋಕಭವನದಲ್ಲಿ ಬುಧವಾರ ಸಂಜೆ 5.15ರ ಸುಮಾರಿಗೆ ನಡೆಯಲಿರುವ ಕಾರ್ಯಕ್ರಮಕ್ಕೆ 55 ವಿವಿಧ ಸಮುದಾಯಗಳ ಸ್ವಾಮೀಜಿಗಳು, ಮೌಲ್ವಿಗಳು, ಫಾದರ್ ಗಳಿಗೆ ಆಹ್ವಾನ ಕೊಡಲಾಗಿದೆ. ಈ ಮೂಲಕ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಮಠಾಧೀಶರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.



