LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಸ್ವೈ ಮನೆಗೆ ನುಗ್ಗಲು ಕೈ ಕಾರ್ಯಕರ್ತರ ಪ್ರಯತ್ನ

ಪ್ರಜಾಸ್ತ್ರ ಸುದ್ದಿ

ಶಿಕಾರಿಪುರ(Shivamogga): ಮುಡಾ(MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವುದು ಈಗ ದೊಡ್ಡ ರಾಜಕೀಯ ತಿರುವು ಪಡೆದುಕೊಂಡಿದೆ. ಕಾನೂನು ಹೋರಾಟ ಒಂದು ಕಡೆಯಾದರೆ, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ದಾರಿ ಮಾಡಿದೆ. ಹೀಗಾಗಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮಾಜಿ ಸಿಎಂ, ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ(BSY) ಮನೆಗೆ ನುಗ್ಗಲು ಪ್ರಯತ್ನಿಸಿದ ಘಟನೆ ನಡೆದಿದೆ. ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್ವೈ ಮನೆಯವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿಕೊಂಡು ಬಂದ ಕಾಂಗ್ರೆಸ್(Congress) ಕಾರ್ಯಕರ್ತರು, ಬಿಎಸ್ವೈ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿದರು. ಸಿಎಂ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಅವರ ಮನೆಗೆ ನುಗ್ಗಲು ಯತ್ನಿಸಿದರು. ಅವರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಟ್ಟು ಕಳಿಸಿದ್ದಾರೆ. ಒಟ್ಟಿನಲ್ಲಿ ಈ ಒಂದು ಪ್ರಕರಣ ಹೊಸ ಸ್ವರೂಪ ಪಡೆದುಕೊಳ್ಳುತ್ತಿದ್ದು, ದೆಹಲಿ, ಜಾರ್ಖಂಡ್ ಸೇರಿ ಇತರೆ ರಾಜ್ಯಗಳಲ್ಲಿ ಮಾಡಿದಂತೆ ಕೇಂದ್ರದ ಬಿಜೆಪಿ ಕರ್ನಾಟಕದಲ್ಲಿಯೂ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಆಕ್ರೋಶ ವ್ಯಕ್ತವಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST