LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ವೀಕ್ಷಿಸಿದ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮತದಾರರ ಪಟ್ಟಿ ವೀಕ್ಷಕರಾದ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರು ಶನಿವಾರ ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲಿಸಿದರು. 28-ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದ ಅಕ್ಕ ನಾಗಮ್ಮ ಬಾಲಕೀಯರ ಪದವಿ ಪೂರ್ವ ಕಾಲೇಜ್  ಮತಗಟ್ಟೆ ಸಂಖ್ಯೆ 60, 68, 70 ಮತ್ತು 71 ಮಗಟ್ಟೆಗಳಿಗೆ ಭೇಟಿ ನೀಡಿ ಬಿಎಲ್ಓಗಳಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಕುರಿತು ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.

ಪದವಿ ಪೂರ್ವ ಕಾಲೇಜ ವಿಧ್ಯಾರ್ಥಿಗಳಿಗೆ Voter Helpline App ಮುಖಾಂತರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಸೂಚಿಸಿದರು. ಮನಗೂಳಿ ಪಟ್ಟಣದ ಮತಗಟ್ಟೆ ಸಂಖ್ಯೆ 26, 27, 28, 29, 30 ಮತ್ತು 31 ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಿಎಲ್ಓಗಳು,  ಅರ್ಹ ಯುವ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಸೂಚಿಸಿದರು. ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದ ಮತಗಟ್ಟೆ ಸಂಖ್ಯೆ 116 ಮತ್ತು 117 ಹಾಗೂ ಗೆದ್ದಲಮರಿ ಗ್ರಾಮದ ಮತಗಟ್ಟೆ ಸಂಖ್ಯೆ 121 ಹಾಗೂ 122ಕ್ಕೆ  ಹಾಗೂ ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 40, 41, 42ಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ತಾಲೂಕಾ ತಹಶೀಲ್ದಾರರು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST