LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಿಡ್ನಾಪ್

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ಇತ್ತೀಚೆಗೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಗಂಡು ಮಗುವನ್ನು ಎತ್ತಿಕೊಂಡು ಹೋಗಿ ಒಂದು ದಿನದ ಬಳಿಕ ವಾಪಸ್ ಬಂದ ಘಟನೆ ಮಾಸುವ ಮನ್ನವೇ ಕಲಬುರಗಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯಿಂದ ನವಜಾತ ಗಂಡು ಶಿಶುವೊಂದನ್ನು ಅಪಹರಣ ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಪಹರಣ ಮಾಡಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮಹಿಳೆಯರಿಬ್ಬರ ಚಲನವಲನ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ನರ್ಸ್ ವೇಶದಲ್ಲಿ ಬಂದ ಇಬ್ಬರು ಮಹಿಳೆಯರು ಶಿಶುವಿಗೆ ವಿವಿಧ ಪರೀಕ್ಷೆಗಳನ್ನು ಮಾಡಬೇಕಾಗಿದೆ ಎಂದು ತಾಯಿಗೆ ಹೇಳಿ ತೆಗೆದುಕೊಂಡು ಹೋಗಿದ್ದಾರೆ. ಎಷ್ಟು ಹೊತ್ತು ಆದರೂ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಮಗು ಇಲ್ಲವೆಂದು ತಿಳಿದಾಗ ಅಪಹರಣವಾಗಿರುವುದು ತಿಳಿದಿದೆ. ಆರೋಪಿಗಳ ಬಗ್ಗೆ ಕೆಲವು ಸುಳಿವು ಸಿಕ್ಕಿವೆ. ಅವರ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ. ಆದಷ್ಟು ಬೇಗ ಅವರನ್ನು ಹಿಡಿಯುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST