LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತಕ್ಕೆ 301 ರನ್ ಗಳ ಗುರಿ ನೀಡಿದ ಕಿವೀಸ್

ಪ್ರಜಾಸ್ತ್ರ ಸುದ್ದಿ

ಗುಜರಾತ್(Gujrat): ವಡೋದರ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ 301 ರನ್ ಗಳ ಗುರಿಯನ್ನು ನೀಡಲಾಗಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭನಂ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆರಂಭದಲ್ಲಿ ಬೌಲರ್ ಗಳು ಉತ್ತಮ ಬೌಲಿಂಗ್ ಮಾಡಿ ರನ್ ಓಟಕ್ಕೆ ಕಡಿವಾಣ ಹಾಕವುದರ ಜೊತೆಗೆ ವಿಕೆಟ್ ಸಹ ಪಡೆದರು.

ಕಾನ್ವೆ 56, ಹೆನ್ರಿ ನಿಕೋಲ್ಸ್ 62, ಡ್ರೈಲ್ ಮಿಚಲ್ 84 ರನ್ ಗಳಿಂದಾಗಿ 8 ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿತು. ಭಾರತ ಪರ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್ ಪಡೆದರು. ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು. 301 ರನ್ ಗಳ ಗುರಿಯನ್ನು ಬೆನ್ನು ಹತ್ತಿರುವ ಟೀಂ ಇಂಡಿಯಾ 28 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ. ನಾಯಕ ಗಿಲ್ 56, ರೋಹಿತ್ ಶರ್ಮಾ 26 ರನ್ ಗಳಿಗೆ ಔಟ್ ಆಗಿದ್ದಾರೆ. ವಿರಾಟ್ ಕೊಹ್ಲಿ 66, ಶ್ರೇಯಸ್ ಅಯ್ಯರ್ 3 ರನ್ ಗಳೊಂದಿಗೆ ಆಡುತ್ತಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST