ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೊಲೀಸರ ವಿರೋಧದ ನಡುವೆಯೂ ಕಾಂಗ್ರೆಸ್ ಕಚೇರಿ ಮುಂದೆ ಬಂದು ಧಿಕ್ಕಾರ ಕೂಗಿ ಕಲ್ಲು ಹೊಡೆದ ಘಟನೆ ನಗರದಲ್ಲಿ ನಡೆದಿದೆ. ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾವಚಿತ್ರ ದಹಸಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.
ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲು ತೂರಿದರು. ಇಟ್ಟಿಗೆಯನ್ನು ಸಹ ಎಸೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ರಾಜ್ಯದಲ್ಲಿನ ಗಂಭೀರ ಸಮಸ್ಯೆಗಳನ್ನು ಬಿಟ್ಟು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



