ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೇರಳದ ವಯನಾಡಿನಲ್ಲಿ ಮಣ್ಣು ಕುಸಿತದಿಂದಾಗಿ 8 ಜನರು ಮೃತಪಟ್ಟಿದ್ದಾರೆ. ಇಷ್ಟಾದಾರೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಥಳಕ್ಕೆ ಭೇಟಿ ನೀಡಿಲ್ಲ. ಇವರ ಪಾರ್ಟ್ ಟೈಮ್ ರಾಜಕಾರಣಿಗಳಾಗಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ತುಹಿನ್ ಸಿನ್ಹಾ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಜಕೀಯ ಪ್ರವಾಸಿಯಾಗಿದ್ದಾರೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಇಬ್ಬರಲ್ಲಿ ಒಬ್ಬರು ಸಹ ಸಂತ್ರಸ್ತ ಕುಟುಂಬಸ್ಥರನ್ನು ಭೇಟಿಯಾಗಿಲ್ಲ ಎಂದು ಕಿಡಿಕಾರಿದ್ದಾರೆ.



