LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೋಕ್ಸೋದಡಿ ಸಿಲುಕಿರುವ ಯಡಿಯೂರಪ್ಪ ಬಗ್ಗೆ ಕರಂದ್ಲಾಜೆ ಮಾತಾಡಲಿ: ಸಿಎಂ

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಸರ್ಕಾರಿ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಇದಕ್ಕೆ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಯಡಿಯೂರಪ್ಪ ಬಗ್ಗೆ ಮಾತನಾಡಲಿ. ಬಿಜೆಪಿ ಸಂಸದೀಯ ಮಂಡಳಿಯಿಂದ ಅವರನ್ನು ತೆಗೆದು ಹಾಕುವಂತೆ ಹೇಳಲಿ ಎಂದು ತಿರುಗೇಟು ನೀಡಿದರು.

ಕೋರ್ಟ್ ಕೃಪೆಯಿಂದ ಯಡಿಯೂರಪ್ಪ ಉಳಿದುಕೊಂಡಿದ್ದಾರೆ. ಅವರ ವಿರುದ್ಧ ದೋಷಾರೋಪ ಪಟ್ಟಿಯಿದೆ ಎಂದರು. ಮುಖ್ಯಮಂತ್ರಿಯಾಗಿ ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಅತಿ ಹೆಚ್ಚು ಬಾರಿ ಪುಷ್ಪಾರ್ಚನೆ ಮಾಡುವ ಅವಕಾಶ ಸಿಕ್ಕಿದೆ. ರಾಜ್ಯದ ಜನರು ಇದಕ್ಕೆ ಅವಕಾಶ ನೀಡಿದ್ದಾರೆ. ಚಾಮುಂಡೇಶ್ವರಿ ಆಶೀರ್ವಾದ ಸದಾ ನನಗೆ ಇರುತ್ತೆ. ರಾಜಕೀಯದಲ್ಲಿ ಹೊಗಳುವವರು ಇರುತ್ತಾರೆ. ತೆಗಳುವವರು ಇರುತ್ತಾರೆ. ಎಲ್ಲರೂ ಹೊಗಳುವವರೆ ಇರಬೇಕು ಎಂದು ಪ್ರಜಾಪ್ರಭುತ್ವದಲ್ಲಿ ನಾನು ನಿರೀಕ್ಷಿಸುವುದಿಲ್ಲ ಅಂತಾ ಹೇಳಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST