ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಿಜಯಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹುಚ್ಚಪ್ಪ ಶಿಂಗೆಗೋಳ ಅವರ ಮನೆ, ಕಚೇರಿ ಹಾಗೂ ತೋಟದ ಮನೆಯ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಸುಕೂನ್ ಕಾಲೋನಿಯ ನಿವಾಸ, ಚಾಲುಕ್ಯ ನಗರದಲ್ಲಿರುವ ಮನೆ, ಹಿಟ್ನಳ್ಳಿಯ ಜಿಲ್ಲಾ ತರಬೇತಿ ಕೇಂದ್ರದ ಕಚೇರಿ ಹಾಗೂ ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದಲ್ಲಿರುವ ತೋಟದ ಮನೆಯ ಮೇಳೆ ಜಿಲ್ಲಾ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಮಹಾನಿಂಗರಾಯ ನಂದಗಾವಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಆನಂದ ಟಕ್ಕಣ್ಣವರ ಹಾಗೂ ಇತರೆ ಅಧಿಕಾರಿಗಳು, ಸಿಬ್ಬಂದಿ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಹುಚ್ಚಪ್ಪ ಶಿಂಗೆಗೋಳ ಈ ಹಿಂದೆ ಸಿಂದಗಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.


