ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸೇವಾನಭವ ಪರಿಗಣಿಸಿ ಕಾನಿಪ ಜಿಲ್ಲಾ ಕಾರ್ಯಕಾರಿ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಮಲ್ಲಿಕಾರ್ಜುನ ಅಲ್ಲಾಪೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾನಿಪ ಜಿಲ್ಲಾಧ್ಯಕ್ಷರಾದ ಅಶೋಕ ಯಡಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ನಗರದ ಪತ್ರಿಕಾ ಭವನದಲ್ಲಿ ಜೂನ್ 30ರಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಜಿಲ್ಲಾ ಪದಾಧಿಕಾರಿಗಳ ಸರ್ವಾನುಮತದಿಂದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಂಘದ ಸಂಘಟನೆ ಮತ್ತು ಬೆಳವಣಿಗೆಗೆ ತಮ್ಮ ಸಹಕಾರ ಅಗತ್ಯ ಎಂದು ತಿಳಿಸಿದ್ದಾರೆ.



