LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್ಐ, ನಿವೃತ್ತ ಡಿವೈಎಸ್ಪಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಪಿಎಸ್ಐ ಹಾಗೂ ನಿವೃತ್ತ ಡಿವೈಎಸ್ಪಿಯೊಬ್ಬರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ರವೀಂದ್ರ ದನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಡೆತ್ ನೋಟ್ ನಲ್ಲಿ ಮೂಡಲಗಿ ವಲಯದ ಪಿಎಸ್ಐ ಆನಂದ ಹಾಗೂ ನಿವೃತ್ತ ಡಿವೈಎಸ್ಪಿ ಮುಲ್ಲಾ ಎಂಬುವರ ಹೆಸರು ಬರೆದು, ಪೊಲೀಸರಿಂದಲೂ ತನಗೆ ಅನ್ಯಾಯವಾಗಿದೆ ಎಂದಿದ್ದಾನೆ.

ಲಕ್ಷ್ಮಣ ಚಂದರಗಿ ಹಾಗೂ ಭರಮಪ್ಪ ಪೂಜಾರಿ ಎಂಬುವರಿಂದ 8 ಲಕ್ಷ ರೂಪಾಯಿ ಸಾಲ ಪಡೆದಿದ್ದನಂತೆ. ಇದನ್ನು ಕೇಳುವ ನೆಪದಲ್ಲಿ ಇವರಿಬ್ಬರು ನಿರಂತರವಾಗಿ ಜೀವ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಪೊಲೀಸ್ ಠಾಣೆಗೆ ನ್ಯಾಯ ಕೇಳಲು ಹೋದಾಗಲೂ ನ್ಯಾಯ ಸಿಕ್ಕಿಲ್ಲ. ಪೊಲೀಸರಿಂದಲೂ ಅನ್ಯಾಯವಾಗಿದೆ ಎಂದು ಉಲ್ಲೇಖಿಸಿದ್ದಾನಂತೆ. ಈ ಘಟನೆ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಕೈಗೊಳ್ಳಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST