ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮಗೆ ಆಗ್ರಹಿಸಿ ವಿಪಕ್ಷಗಳು ಸದನದಲ್ಲಿ ಸೋಮವಾರ ಪಟ್ಟು ಹಿಡಿದಿವೆ. ಹೀಗಾಗಿ ಗದ್ದಲ ಉಂಟಾಗಿದ್ದು, ಇದರ ನಡುವೆಯೇ ಹಲವು ಮಸೂದೆಗಳಿಗೆ ಅಂಗೀಕಾರ ಸಿಕ್ಕಿದೆ. ಯಾವುದೇ ಚರ್ಚೆಯಿಲ್ಲದೆ ಮಸೂದೆಗಳಿಗೆ ಅಂಗೀಕಾರ ಸಿಕ್ಕಿದೆ. ಯಾವೆಲ್ಲ ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ ಅನ್ನೋದು ಇಲ್ಲಿದೆ ನೋಡಿ.
2026ನೇ ಸಾಲಿನ ಕರ್ನಾಟಕ ನೋಂದಣಿ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಸಾಲಿನ ಕೈಗಾರಿಕೆ ಸೌಲಭ್ಯ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಭೂ ಕಂದಾಯ ತಿದ್ದುಪಡಿ ಮಸೂಸದೆ. 2026ನೇ ಕರ್ನಾಟಕ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಸರ್ಕಾರಿ ಉದ್ಯಾನಗಳ ಸಂರಕ್ಷಣೆ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಸರಕು ಹಾಗೂ ಸೇವೆಗಳ ತೆರಿಗೆ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಅಂಗಡಿಗಳ ಮತ್ತು ವಾಣಿಜ್ಯ ಕಾರ್ಯ ಸಂಸ್ಥೆಗಳ ತಿದ್ದುಪಡಿ ಮಸೂದೆ. 2026ನೇ ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಎರಡನೇ ತಿದ್ದುಪಡಿ ಮಸೂದೆ. ಇದೆಲ್ಲವೂ ಅಂಗೀಕಾರಗೊಂಡಿವೆ.



