ಪ್ರಜಾಸ್ತ್ರ ಸುದ್ದಿ
ಹ್ಯಾಮಿಲ್ಟನ್(Hamilton): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಒಂದೇ ಒಂದು ಬೌಲ್ ಆಡಲು ಸಹ ಆಗಿಲ್ಲ. ಟಾಸ್ ಗೆದ್ದಿದ್ದ ಟೀಂ ಇಂಡಿಯಾ ನಾಯಕ ಶುಭನಂ ಗಿಲ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮಳೆಯಿಂದಾಗಿ 40 ಓವರ್ ಗಳ ಪಂದ್ಯ ಆಡಿಸಲು ನಿರ್ಧರಿಸಲಾಗಿತ್ತು. ಆದರೆ, ಮಳೆರಾಯ ಅದಕ್ಕೂ ಅವಕಾಶ ಕೊಡಲಿಲ್ಲ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರ ಸಾಧಿಸಿದೆ. ಇನ್ನೊಂದು ಪಂದ್ಯ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ನ್ಯೂಜಿಲೆಂಡ್ ಗೆ 2 ಪಂದ್ಯಗಳು ಗೆಲ್ಲಬೇಕಾದ ಒತ್ತಡದಲ್ಲಿದೆ.


