LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಕಾನೂನು ಬಾಹಿರ ಕೆಲಸ ಮಾಡುವ ಮೈಕ್ರೋ ಫೈನಾನ್ಸ್ ಗಳ ಮೇಲೆ ಕ್ರಮ’

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಆತ್ಮಹತ್ಯೆ ಪ್ರಕರಣಗಳು ಸಹ ಹೆಚ್ಚುತ್ತಿವೆ. ಈ ಬಗ್ಗೆ ನಗರದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಹಾಗೂ ಕಾನೂನು ಬಾಹಿರ ಕೆಲಸ ಮಾಡುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೇ ಜನರು ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಿಬಾರದು ಎಂದರು.

ಖಾಸಗಿ ಹಣಕಾಸು ಸಂಸ್ಥೆಗಳು, ಲೇವಾದೇವಿ ಮಾಡುವವರು ಹೆಚ್ಚಿನ ಬಡ್ಡಿ ವಸೂಲಿ ಮಾಡುವುದಲ್ಲದೆ, ಗೂಂಡಾಗಳ ಮೂಲಕ ಜರನ್ನು ಹೆದರಿಸುತ್ತಿದ್ದಾರೆ. ಫೈನಾನ್ಸ್ ಕಂಪನಿಗಳು ವಾರ್ಷಿಕವಾಗಿ ಶೇಕಡ 28ರಿಂದ 30ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದಾಗಿ ಸಾಲ ಪಡೆದವರು ಬೇಸತ್ತು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಹೀಗಾಗಿ  ಮೈಕ್ರೋ ಫೈನಾನ್ಸ್ ನಿಯಂತ್ರಣದ ಸಲುವಾಗಿ ಸರ್ಕಾರ ಶೀಘ್ರದಲ್ಲಿ ಸುಗ್ರೀವಾಜ್ಞೆ ತರಲಿದ್ದು, ಕಿರುಕುಳ ನೀಡುವ ಫೈನಾನ್ಸ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST