LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಹೆಬ್ಬಾಳ್ಕರ್ ಅಸಮಾಧಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ(2A Reservation) ನೀಡುವ ವಿಚಾರ ಸಂಬಂಧ ಡಿಸೆಂಬರ್ 10ರಂದು ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ, ಜಯಮೃತ್ಯುಂಜಯ ಸ್ವಾಮೀಜಿ(Jaya Mrityunjaya Swamiji) ಕರೆ ನೀಡಿದ್ದಾರೆ. ಈ ಸಂಬಂಧ ಇಂದು ನಗರದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ವಾಮೀಜಿಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ, ಸರ್ಕಾರಕ್ಕೆ ಮುಜುಗರ ತರುವುದು ಬೇಡ. ಸರ್ಕಾರದಲ್ಲಿದ್ದರೂ ಸಮಾಜದ ಪರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದೀವಿ ಎಂದರು.

ಯಾವುದೇ ಸರ್ಕಾರವಿದ್ದರೂ ನಾವು ಹೋರಾಟ ಮಾಡಿದ್ದೇವೆ. ಪಂಚಮಸಾಲಿ ಸಮಾಜಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತನಾಡಿದ್ದೇವೆ. ಆದರೆ, ಸ್ವಾಮೀಜಿಗಳು ಅಧಿವೇಶನದ ವೇಳೆ ಸರ್ಕಾರಕ್ಕೆ ಮುಜುಗರ ತರುವ ಹೋರಾಟ ಮಾಡಬಾರದು. ಅವರ ಹೋರಾಟ ಮರ್ಯಾದೆಯ ಹಾದಿಯಲ್ಲಿರಲಿ ಎನ್ನುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಹೊರ ಹಾಕಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST