ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳ ತಂಡವನ್ನು ಶನಿವಾರ ತಮ್ಮ ನಿವಾಸದ ಬಳಿ ಭೇಟಿ ಮಾಡಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದರು.
ವಿದ್ಯಾರ್ಥಿಗಳು ಭಾರತದ ಭವಿಷ್ಯ. ಪ್ರಧಾನಿ ಮೋದಿ ಭೂತಕಾಲ. ಹೀಗಾಗಿ ಅವರೊಂದಿಗೆ ಭವಿಷ್ಯತ್ತಿನೊಂದಿಗೆ ಹಾರಾಡಲು ಸಾಧ್ಯವಿಲ್ಲ ಎಂದರು. ಇನ್ನು ಧರ್ಮೇಂದ್ರ ಪ್ರಧಾನ್ ಗೆ ಬೇರೆ ಖಾತೆ ಕೊಡುವ ಕುರಿತು ಚರ್ಚೆ ನಡೆದಿದೆಯಂತೆ. ಇದರಿಂದ ಯಾವುದೇ ಉಪಯೋಗವಿಲ್ಲ ಅಂತಾ ಹೇಳಿದರು.



