LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ರೈತಪರ ಸಂಘಟನೆಗಳಿಂದ ಮೋರಟಗಿಯಿಂದ ವಿಜಯಪುರ ಪಾದಯಾತ್ರೆ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಸಿಂದಗಿ ಮತಕ್ಷೇತ್ರದ ಮೋರಟಗಿ ಗ್ರಾಮದಿಂದ ವಿಜಯಪುರ ನಗರದವರೆಗೆ ಅಕ್ಟೋಬರ್ 12ರಂದು ಬೆಳಿಗ್ಗೆ 8 ಗಂಟೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಪೀರು ಕೆರೂರ ಮನವಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಸಾಲದ ಹೊರೆ, ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ಕೃಷಿ ಉತ್ಪನ್ನಗಳ ಮಾರುಕಟ್ಟೆಯಲ್ಲಿನ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಮೋರಟಗಿಯಿಂದ ವಿಜಯಪುರದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪಾದಯಾತ್ರೆ ಹಮ್ಮಿಕೊಂಡು ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು.

ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಬೇಕು. ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು. ಹತ್ತಿ, ತೊಗರಿ, ಜೋಳ ಸೇರಿದಂತೆ ವಿವಿಧ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ನ್ಯಾಯಯುತ ಬೆಲೆ ಒದಗಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಅಗತ್ಯಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಪಕವಾಗಿ ಸಂರಕ್ಷಿಸಿ, ಮುಂಬರುವ ಬೇಸಿಗೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೈತರ ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದು ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಪಾದಯಾತ್ರೆಗೆ ಕನ್ನಡಪರ, ದಲಿತಪರ, ಕಾರ್ಮಿಕಪರ, ವಕೀಲರ ಸಂಘ, ವೈದ್ಯರ ಸಂಘ ಸೇರಿದಂತೆ ಪ್ರತಿಯೊಂದ ಸಂಘಟನೆಗಳು, ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉತ್ತರ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷ ಶಂಕರಗೌಡ ಹಿರೇಗೌಡರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ತಾಲೂಕಾಧ್ಯಕ್ಷ ಬಸವರಾಜ ರಂಜುಣಗಿ, ದಸರತಸಿಂಗ ರಜಪೂತ, ಬಂದೇನಮಾಜ್ ಮುಲ್ಲಾ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST