LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಬೆಂಕಿ ಅನಾಹುತ: 300ಕ್ಕೂ ಹೆಚ್ಚು ಕೊಳಗೇರೆ ಮನೆಗಳಿಗೆ ಹಾನಿ

ಪ್ರಜಾಸ್ತ್ರ ಸುದ್ದಿ

ದೆಹಲಿ(New Delhi): ಬೆಂಕಿ ಅನಾಹುತದಿಂದಾಗಿ 300ಕ್ಕೂ ಹೆಚ್ಚು ಕೊಳಗೇರಿ ಮನೆಗಳು ಸುಟ್ಟು ಹೋಗಿರುವ ಘಟನೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪ್ರದೇಶದ ಮಟಿಯಾಲ ಕೊಳಗೇರಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ಸುಮಾರು 11.50ರ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯರು ಬೆಂಕಿ ನಂದಿಸುವ ಕೆಲಸ ಮಾಡಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಅಪಾರ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿರುವುದರಿಂದ ನಂದಿಸಲು ಹರಸಾಹಸ ಪಡಬೇಕಾಯಿತು. 23 ಅಗ್ನಿಶಾಮಕ ವಾಹನಗಳು ಮುಂಜಾನೆ 3.45ರ ತನಕ ಬೆಂಕಿ ನಂದಿಸುವ ಕೆಲಸ ಮಾಡಿವೆ. ಯಾವುದೇ ಅನಾಹುತ ಸಂಭವಿಸದಂತೆ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಇದಕ್ಕೆ ಏನು ಕಾರಣ ಅನ್ನೋದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST