LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಜಿಗಜಿಣಗಿ ಚಾಲನೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರಧಾನಿ ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ(har ghar tiranga) ಅಭಿಯಾನಕ್ಕೆ ಸಂಸದ ರಮೇಶ ಜಿಗಜಿಣಗಿ ಅವರು ಮಂಗಳವಾರ, ಚಿದರಂಬರ ನಗರದಲ್ಲಿರುವ ಚಿದಂಬರ ಜೋಶಿ ರೊಳ್ಳಿ ಅವರ ಮನೆಯ ಮೇಲೆ ಧ್ವಜಾ ಹಾರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ(independence day) ಬಂದು 75 ವರ್ಷ ತುಂಬಿರುವ ಸಂದರ್ಭದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ದೊಡ್ಡ ಪ್ರಮಾಣದಲ್ಲಿ ಆಚರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಈರಣ್ಣ ರಾವೂರ, ಮಹಾನಗರಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ನಗರ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಸುರೇಶ ಬಿರಾದಾರ, ವಿಜಯ ಜೋಶಿ, ರಾಜೇಶ ತೌಸೆ, ಕಾಂತು ಸಿಂಧೆ, ಪಾಪುಸಿಂಗ ರಜಪೂತ, ಪ್ರವೀಣ ಕೂಡಗಿ, ಸಂಪತ ಕೊವಳ್ಳಿ, ಪ್ರವೀಣ ನಾಟೀಕಾರ, ವಿನೋದ ಮಣೂರ, ಸಂತೋಷ ಕಮತರ, ಕೃಷ್ಣಾ ರಾಠೋಡ, ವೆಂಕಟೇಶ ಜೋಶಿ (ನಂದೊಡಗಿ) ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST