LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರಾ: ಬಸವಣ್ಣ, ಗಾಂಧಿ ಸಂದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijyapura): ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸ್ತಬ್ಧಚಿತ್ರ ವಿಶೇಷತೆ:

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು. ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿವೆ. ಇನ್ನು ವಿಶ್ವಗುರು ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ" ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರ ವಿನ್ಯಾಸಗೊಳಿಸಲಾಗಿತ್ತು.

ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು. ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ಬಸವಣ್ಣನವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದ ಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ ಅಳವಡಿಸಲಾಗಿತ್ತು. ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST