LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷ ಸಂಘಟನೆ ನನ್ನ ಮನೆ ಕೆಲಸವಲ್ಲ: ವಿಜಯೇಂದ್ರ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ತಿರುಗಿ ಬೀಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬುಧವಾರ ಸಂಸದ ಡಾ.ಕೆ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದರು. ಯುದ್ಧ ಸಾರುವುದಾಗಿಯೂ ಹೇಳಿದ್ದರು. ಇದಕ್ಕೆ ಗುರುವಾರ ಪ್ರತಿಕ್ರಿಯೆ ನೀಡಿರುವ ಬಿ.ವೈ ವಿಜಯೇಂದ್ರ, ಜಿಲ್ಲಾಧ್ಯಕ್ಷೆ ನೇಮಕದಲ್ಲಿ ನನ್ನ ಪಾತ್ರವಿಲ್ಲ. ಕೇಂದ್ರ ನೇಮಿಸಿದ ವೀಕ್ಷಕರ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ. ನಾನು ಮುಖ್ಯಮಂತ್ರಿಯಾಗಲು ಪಕ್ಷ ಸಂಘಟನೆ ಮಾಡುತ್ತಿಲ್ಲ. ಇದು ನನ್ನ ಮನೆಯ ಕೆಲಸವಲ್ಲ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಆಯ್ಕೆ ಆಗಿರುವುದು ಸುಧಾಕರ್ ಅವರ ಸಂಬಂಧಿಯೆ. ಒಳ್ಳೆಯ ಕೆಲಸ ಮಾಡಿದರೆ ಮುಂದೆ ಬೇರೆಯವರಿಗೂ ಅವಕಾಶ ಸಿಗುತ್ತದೆ. ಅದಕ್ಕೆ ತಾಳ್ಮೆ ಇರಬೇಕು. ಮಾಹಿತಿ ಇಲ್ಲದೆ ಹೇಳಿಕೆ ನೀಡುವುದು ಸುಧಾಕರ್ ಅವರಿಗೆ, ನನಗೂ ಶೋಭೆ ತರುವುದಿಲ್ಲ. ಮೂರು ಅಭ್ಯರ್ಥಿಗಳ ಹೆಸರು ಇರುವ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆಯ್ಕೆ ಪಾರದರ್ಶಕವಾಗಿ ನಡೆದಿದೆ ಎಂದರು. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕೆಂಡ ಕಾರುವ ಸ್ವಪಕ್ಷೀಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದ ಬಳಿಕ ಇದಕ್ಕೆ ತೆರೆ ಬೀಳುತ್ತಾ ನೋಡಬೇಕು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST