LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲ ಮಾದರಿಯ ಕ್ರಿಕೆಟಿಗೆ ಪಿಯೂಷ್ ಚಾವ್ಲಾ ನಿವೃತ್ತಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಭಾರತೀಯ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. 36 ವರ್ಷದ ಆಟಗಾರ ತಮ್ಮ ಇನ್ಸ್ಟಾದಲ್ಲಿ ಈ ಬಗ್ಗೆ ತಿಳಿಸಿದ್ದು, 20 ವರ್ಷಗಳ ಕಾಲ ಕಳೆದ ಈ ಸುಂದರ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಕೋಚ್ ಸೇರಿದಂತೆ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. ಭಾರತ ತಂಡದ ಪರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಟೆಸ್ಟ್, 25 ಏಕದಿನ ಹಾಗೂ 7 ಟಿ-20 ಪಂದ್ಯಗಳನ್ನು ಆಡಿದ್ದಾರೆ. 43 ವಿಕೆಟ್ ಗಳನ್ನು ಪಡೆದಿದ್ದಾರೆ.

2007ರಲ್ಲಿ ಭಾರತದ ಮೊದಲ ಟಿ-20 ವಿಶ್ವಕಪ್ ಗೆದ್ದಾಗ, 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿ ಆಡಿದ್ದರು. ಈ ಮೂಲಕ ಎರಡು ವಿಶ್ವಕಪ್ ಗೆದ್ದ ತಂಡದಲ್ಲಿ ಸದಸ್ಯರಾಗಿ ಮಿಂಚಿದ್ದರು. ಇನ್ನು ಐಪಿಎಲ್ ನಲ್ಲಿ ಕೋಲ್ಕತ್ತಾ, ಚೆನ್ನೈ, ಪಂಜಾಬ್ ಹಾಗೂ ಮುಂಬೈ ತಂಡಗಳಲ್ಲಿ ಆಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST