ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ವಚನಾನಂದ ಸ್ವಾಮೀಜಿಯನ್ನು ಗುರುವಾರ ಪೊಲೀಸರು ತೀವ್ರ ವಿಚಾರಣೆ ನಡೆಸಿದರು. ಇದರ ಜೊತೆಗೆ ವೈದ್ಯಕೀಯ ಪರೀಕ್ಷೆ ಸಹ ನಡೆಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಮುಂಜಾನೆ 10ಕ್ಕೆ ಠಾಣೆಗೆ ಬಂದ ಸ್ವಾಮೀಜಿಯನ್ನು ಮಧ್ಯಾಹ್ನ 2 ಗಂಟೆಯ ತನಕ ವಿಚಾರಣೆ ನಡೆಸಿದರು.
ಊಟವಾದ ಬಳಿಕ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ರಕ್ತದ ಮಾದರಿ ಪಡೆಯಲಾಗಿದೆ. ಗದಗ ಮೂಲದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಅನ್ನೋ ಸಂಬಂಧ ದೂರು ದಾಖಲಾಗಿದೆ. ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ಹರಿಹರ ಗ್ರಾಮೀಣ ಠಾಣೆಗೆ ವರ್ಗಾವಣೆಗೊಂಡಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶಿಕ್ಷಣ ಸಂಸ್ಥೆಯಲ್ಲಿನ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪವಿದೆ. ಈ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಪದಚ್ಯುತಿಗೊಳಿಸಿದ ಬಳಿಕ ಈ ಆರೋಪ ಕೇಳಿ ಬಂದಿದೆ.



