LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕರ್ನಾಟಕ ಗುತ್ತಿಗೆದಾರರ(Contractors) ಸಂಘದ ಅಧ್ಯಕ್ಷ ಕೆಂಪಣ್ಣ ಗುರುವಾರ ನಿಧನರಾಗಿದ್ದಾರೆ. ಹೊಸಕೋಟೆಯಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮುಂಜಾನೆ ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಕೆಂಪಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟು ಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇಕಡ 40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭಿತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಬರೆಯುವ ಮೂಲಕ ಸಂತಾಪ ಸೂಚಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST