LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷೆ ಅಕ್ರಮ ತಡೆಗೆ ತಿದ್ದುಪಡಿ ಮಸೂದೆ ಮಂಡನೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಹೊಂದಿರುವ ತಿದ್ದುಪಡಿ ಮಸೂದೆಯನ್ನು ಸೋಮವಾರ ಮಂಡಿಸಿದೆ. ಕೇಂದ್ರ ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಸೂದೆ ಮಂಡಿಸಿದರು. ಈ ವೇಳೆ ವಿಪಕ್ಷಗಳು ಗದ್ದಲು ನಡೆಸಿದವು.

ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ 5 ರಿಂದ 10 ಕಠಿಣ ಜೈಲು ಶಿಕ್ಷೆ ಹಾಗೂ 50 ಲಕ್ಷ ರೂಪಾಯಿ ತನಕ ದಂಡ, ಪರೀಕ್ಷಾ ಅಕ್ರಮ ಮಾಫಿಯಾ, ಜಾಲಗಳು ಅಕ್ರಮವೆಸಿದರೆ 1 ಕೋಟಿ ತನಕ ದಂಡ ಹಾಗೂ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಕಠಿಣ ನಿಯಮಗಳನ್ನು ತಿದ್ದುಪಡಿ ಮಸೂದೆಯಲ್ಲಿ ಸೇರಿಸಲಾಗಿದೆ. ಇನ್ನು ಈ ಕುರಿತು ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯ ಸರ್ಕಾರಗಳು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬಹುದು. ಚಾರ್ಜ್ ಶೀಟ್ ಸಲ್ಲಿಕೆಯಾದ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವ ಕುರಿತು ತಿಳಿಸಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST