LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ, ವ್ಯಾಪಾರಸ್ಥರಿಂದ ಕೋರ್ಟ್ ಮೊರೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಎಸ್ಐಆರ್ ಪ್ರಕ್ರಿಯೆ ಸೇರಿ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರತಿಭಟನೆ ನಿಲ್ಲಿಸಬೇಕು ಎಂದು, ವ್ಯಾಪಾರಸ್ಥರ ಸಂಘದಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟವರಿಂದ ಕೋರ್ಟ್ ಪ್ರತಿಕ್ರಿಯೆ ಕೇಳಿದೆ. ಅಲ್ಲದೆ ಪ್ರತಿಭಟನೆ ನಡೆಸುತ್ತಿರುವ ಸ್ಥಳವನ್ನು ಎಲ್ಲ ಸಮಯದಲ್ಲೂ, ಶಾಶ್ವತವಾಗಿ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲವೆಂದು ಹೇಳಿದೆ.

ವ್ಯಾಪಾರಿಗಳ ಸಮಿತಿಯವರು ಅರ್ಜಿ ಸಲ್ಲಿಸಿದ್ದು, ಇವರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಪ್ರತಿಭಟನೆ ನಡೆಯುತ್ತಿರುವ ಸುತ್ತಮುತ್ತ ಸರಿಸುಮಾರು 50 ಲಕ್ಷ ಜನರು ವಾಸವಾಗಿದ್ದಾರೆ. ಕನ್ನಾಟ್ ಪ್ಲೇಸ್ ಸೇರಿ ಎಲ್ಲ ಅಂಗಡಿಗಳು ಮುಚ್ಚಿವೆ. ಇದರಿಂದಾಗಿ ಅಲ್ಲಿ ಜನರೆ ಇಲ್ಲದೆ ವ್ಯಾಪಾರ ಬಂದ್ ಆಗಿದೆ ಎಂದು ಹೇಳಿದರು. ಅರ್ಜಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಎಲ್ಲ ಸಂಘಟನೆಗಳನ್ನು ಪ್ರತಿವಾದಿಯನ್ನಾಗಿ ಮಾಡದ ಹೊರತು ಈ ವಿಚಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST