ಪ್ರಜಾಸ್ತ್ರ ಸುದ್ದಿ
ನವದೆಹಲಿ(New delhi): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮದ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿವೆ. ಕೊನೆಗೂ ಈ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ನೀಡಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



