ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಎಸ್ಐಆರ್ ಪ್ರಕ್ರಿಯೆಯಲ್ಲಿ ದೇಶದಲ್ಲಿ ಮತ ಕಳ್ಳತನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡುತ್ತಿರುವುದರ ವಿರುದ್ಧ ನವೆಂಬರ್ 1ರಂದು ಬೃಹತ್ ಪ್ರತಿಭಟನಾ ರ್ಯಾಲಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾನುವಾರ ಕರೆ ನೀಡಿದ್ದಾರೆ. ಮತ ರಕ್ಷಿಸಿ, ದೇಶ ರಕ್ಷಿಸಿ ದೆಹಲಿ ಚಲೋ ಹೋರಾಟಕ್ಕೆ ಸಿದ್ಧವಾಗುವಂತೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ವೋಟರ್ ಲಿಸ್ಟ್ ನಿಂದ ಹೆಸರು ಅಳಿಸಿ ಹಾಕಿರುವುದನ್ನು ಪ್ರಶ್ನಿಸಿದವರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ಇದನ್ನು ಪ್ರಶ್ನಿಸಿ ಹೋರಾಟ ಮಾಡಲಾಗುವುದು. ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರು, ರೈತರು, ಯುವ ಜನತೆ ಸೇರಿದಂತೆ ಪ್ರತಿಯೊಬ್ಬರು ಈ ಒಂದು ಹೋರಾಟದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.


