LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

7 ಜನರ ಜೀವ ಕಿತ್ತುಕೊಂಡ ಮಳೆರಾಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬುಧವಾರ ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುರಂತವೊಂದು ನಡೆದು ಹೋಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿನ ಗೋಡೆ ಕುಸಿದು ಪುಟ್ಟ ಬಾಲಕಿ ಸೇರಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. 9 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿದಾಖಲಿಸಲಾಗಿದೆ. ಇಲ್ಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಲ್ಲಿನ ವೈದ್ಯರಿಗೆ ಸೂಚನೆ ನೀಡಿದರು. ಬೀದಿ ಬದಿಯಲ್ಲಿ ಬಟ್ಟೆ ವ್ಯಾಪಾರ, ಚಪ್ಪಲಿ ಮಾರುವ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಕುಟುಂಬಸ್ಥರಲ್ಲಿ ಇದೀಗ ನೀರವ ಮೌನ ಆವರಿಸಿದೆ. 6 ವರ್ಷದ ಮುಸವೀರ್ ಬೇಗಂ ಅನ್ನೋ ಬಾಲಕಿ ಸೇರಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೇಸಿಗೆ ಬಿಸಿಲಿನಿಂದ ಬಸವಳಿದಿದ್ದ ಜನಕ್ಕೆ ಮಳೆ ತಂಪೆರೆಯುತ್ತೆ ಎಂದುಕೊಂಡಿದ್ದರೆ ಆಶ್ರಯ ಪಡೆದಿದ್ದ ಜನರ ಜೀವವನ್ನು ಬಲಿ ಪಡೆದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST