LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಲಿ ಇರುವ ಗ್ರಂಥಪಾಲಕರ ಹುದ್ದೆ ಭರ್ತಿ ಮಾಡುವಂತೆ ಮನವಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ರಾಜ್ಯದ ವಿವಿಧ ಶಿಕ್ಷಣ ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ದೀರ್ಘಕಾಲದಿಂದ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ನೇಮಕ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಗ್ರಂಥಾಲಯ ಸಂಘದ ಅಧ್ಯಕ್ಷ ಎಂ.ಕೆ. ಬಿರಾದಾರ, ರಾಜ್ಯದ ವಿಶ್ವವಿದ್ಯಾಲಯಗಳು, ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪಿಯು ಕಾಲೇಜುಗಳಲ್ಲಿ ಅನೇಕ ಮಾನ್ಯತ ಗ್ರಂಥ ಪಾಲಕರ ಹುದ್ದೆಗಳು ದೀರ್ಘಕಾಲದಿಂದ ಖಾಲಿಯಾಗಿವೆ. ಸಾರ್ವಜನಿಕ ಗ್ರಂಥಾಲಯಗಳು ರಾಜ್ಯ ಕೇಂದ್ರ, ಜಿಲ್ಲಾ ಕೇಂದ್ರ, ನಗರ ಕೇಂದ್ರ ಹಾಗೂ ತಾಲೂಕು ಗ್ರಂಥಾಲಯಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಗ್ರಂಥಾಲಯಗಳು, ಕರ್ನಾಟಕ ಪಬ್ಲಿಕ್ ಶಾಲೆಗಳ ಗ್ರಂಥಾಲಯಗಳು ಹಾಗೂ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ವಿಧಾನಸೌಧ, ಪುರಾತತ್ವ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿಯೂ ಗ್ರಂಥಪಾಲಕರ ಕೊರತೆ ತೀವ್ರವಾಗಿದೆ ಆದ್ದರಿಂದ  ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ವಿನಂತಿಸಿದರು.

ಸಾವಿರಾರು ಅರ್ಹ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಸರ್ಕಾರದ ತ್ವರಿತ ಹಾಗೂ ಸಕಾರಾತ್ಮಕ ಕ್ರಮವನ್ನು ನಿರೀಕ್ಷಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅತಿಥಿ ಗ್ರಂಥಪಾಲಕರು, ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST