LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

3 ವಾಹನಗಳ ನಡುವೆ ಸರಣಿ ಅಪಘಾತ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದ ಹತ್ತಿರ ಗುರುವಾರ ಭೀಕರ ಸರಣಿ ಅಪಘಾತ(Accident) ಸಂಭವಿಸಿದೆ. ಅಪಘಾತದಲ್ಲಿ 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಟಂಟಂ, ಕಾರು ಸಂಪೂರ್ಣ ನಜ್ಜುನುಜ್ಜಾಗಿವೆ. ಅತಿ ವೇಗವಾಗಿ ಬಂದಿರುವುದೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು, ಟಂಟಂ, ಟಾಟಾ ವಾಹನದ ಮಧ್ಯೆ ಭೀಕರ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ(Injure) 13 ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ರಸ್ತೆಯ ತುಂಬೆಲ್ಲ ಗಾಡಿಗಳ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದರೆ, ಗಾಯಾಳುಗಳ ಆಕ್ರಂದನ ನೋಡಗರಿಗೆ ಮೈ ಜುಮ್ ಎನಿಸುತ್ತಿತ್ತು. ಈ ಬಗ್ಗೆ ಇಂಡಿ ಶಹರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST