ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಗುರುವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿರುವ ಸಿದ್ದರಾಮಯ್ಯನವರು ಶುಕ್ರವಾರ ಮುಂಜಾನೆ ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾದರು. ರಾಜ್ಯಸಭೆಯ ಆಹ್ವಾನವನ್ನು ನಿರಾಕರಿಸಿರುವುದಾಗಿ ಹೇಳಿರುವ ಅವರು ಸಕ್ರಿಯವಾಗಿ ರಾಜ್ಯ ರಾಜಕಾರಣದಲ್ಲಿಯೇ ಇರುವುದಾಗಿ ಹೇಳಿದ್ದಾರೆ. ಹೀಗಾಗಿ ಅವರ ಮುಂದಿನ ನಡೆಯ ಬಗ್ಗೆ ಕುತೂಹಲವಿದೆ.
ಈ ವೇಳೆ ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಜೊತೆಯಲ್ಲಿದ್ದು, ಹೊಸ ಸಚಿವ ಸಂಪುಟದಲ್ಲಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡಬೇಕು ಅನ್ನೋ ಬೇಡಿಕೆ ಇಡುವ ಸಾಧ್ಯತೆಯಿದೆ. ಪುತ್ರ, ಪರಿಷತ್ ಸದಸ್ಯ ಯತೀಂದ್ರಗೂ ಮಂತ್ರಿಗಿರಿ ನೀಡಬೇಕು ಎಂದು ಹೇಳಬಹುದು ಎನ್ನಲಾಗುತ್ತಿದೆ. ಹೀಗಾಗಿ ಈ ಭೇಟಿ ಕುತೂಹಲ ಮೂಡಿಸಿದೆ. ಇನ್ನೊಂದು ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ.



