ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಭೀಕರ ಹತ್ಯೆಯಾಗಿದೆ. ಕರೆಪ್ಪ ಚಂದ್ರಾಮ ಬಿರಾದಾರ(55) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಮಂಗಳವಾರ ಸಂಜೆ 7 ಗಂಟೆಯಿಂದ ಬುಧವಾರ ಮುಂಜಾನೆ 6 ಗಂಟೆ ವೇಳೆಯ ಸಂದರ್ಭದಲ್ಲಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಹೊಲದಲ್ಲಿ ಒಬ್ಬನೆ ಮಲಗಿದ್ದ ಸಂದರ್ಭದಲ್ಲಿ ಹರಿತವಾದ ಆಯುಧದಿಂದ ಬಲಕಣ್ಣಿನ ಕಡೆ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಕುರಿತು ಮೃತನ ಪತ್ನಿಯು ಸಿಂದಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಸಲಾಗುತ್ತಿದೆ.


