LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ, ಟೈರ್ ಸುಟ್ಟು ಪ್ರತಿಭಟನೆ

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ಸಿಂದಗಿ(Sindagi): ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕೆಸರು ಬಳೆದು ಅವಮಾನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಹಾಗೂ ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

[caption id="attachment_12282" align="alignnone" width="900"] ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರು ಬಳೆದಿರುವುದು.[/caption]

ಗ್ರಾಮ ಪಂಚಾಯ್ತಿ ಹತ್ತಿರದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿನ ಭಾವಚಿತ್ರಕ್ಕೆ ಅವಮಾನ ಮಾಡುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಯಾರು ಈ ರೀತಿ ಮಾಡಿದ್ದಾರೆ. ಅವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಈ ವೇಳೆ ಜಯ ಕರ್ನಾಟಕ ಸಂಘಟನೆ ತಾಲೂಕು ಮುಖಂಡ ಶರಣು ಮನಗೂಳಿ, ಡಿಎಸ್ಎಸ್ ಮುಖಂಡ ಅಶೋಕ ಯಂಟಮಾನ, ತಳವಾರ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಆನಂದ ತಳವಾರ, ಈರಣ್ಣ ಭಜಂತ್ರಿ, ಕುಮಾರ ಭಜಂತ್ರಿ, ಮುತ್ತು, ಸುರೇಶ ಮಡಿವಾಳರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST