LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ವೇತನ ಬಾಕಿ, ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಸಿಬ್ಬಂದಿ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕಳೆದ ಹಲವು ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಪಾವತಿಸದಿದ್ದರೆ ನವೆಂಬರ್ 18ರಿಂದ ಕುಟುಂಬ ಸಮೇತ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮ ಪಂಚಾಯಿತಿಯ ಕರವಸೂಲಿಗಾರ ಮುರುಗೇಂದ್ರ ಹುಣಶ್ಯಾಳ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನವೆಂಬರ್ 6ರಂದು ಮನವಿ ಸಲ್ಲಿಸಿರುವ ಅವರು, ತಾವು 2014ರ ಏಪ್ರಿಲ್ 1ರಿಂದ ಹಂದಿಗನೂರ ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾಸಿಕ 7 ಸಾವಿರ ರೂಪಾಯಿ ವೇತನ ಪಡೆಯುತ್ತಿದ್ದೇನೆ. ಆದರೆ ವೇತನವನ್ನು ನಿಯಮಿತವಾಗಿ ಪಾವತಿಸದೆ ಹಲವು ತಿಂಗಳಿಂದ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಕಾರ್ಮಿಕ ನ್ಯಾಯಾಲಯದ ಆದೇಶದಂತೆ 2025ರ ಸೆಪ್ಟೆಂಬರ್‌ನಿಂದ ಇಎಫ್‌ಎಂಎಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿ ವೇತನ ಪಾವತಿಸಲು ಹಿಂದಿನ ಪಿಡಿಒ ಬಸೀರ ಚಿಕ್ಕಲಕಿ ಅವರು ಕ್ರಮ ಕೈಗೊಂಡಿದ್ದರು. ಸರ್ಕಾರದಿಂದ ವೇತನದ ಅನುದಾನ ಬಿಡುಗಡೆಯಾಗಿ ಗ್ರಾಮ ಪಂಚಾಯಿತಿಯ ಇಎಫ್‌ಎಂಎಸ್ ಖಾತೆಗೆ ಹಣ ಜಮೆಯಾಗುತ್ತಿದ್ದರೂ, ತನಗೆ ಮಾತ್ರ ಈವರೆಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದಾರೆ.

news_1794296618_0_558.webpಸೆಪ್ಟೆಂಬರ್ ತಿಂಗಳಲ್ಲಿ ನಡೆಸಿದ ಹೋರಾಟದಲ್ಲಿ ತಾ.ಪಂ ಇಒ ಅನಿಲ ಹಳ್ಳಿ ಅವರಿಗೆ ಮನವಿ ಸಲ್ಲಿಸಿರುವುದು.

ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ದುಸ್ತರವಾಗಿದ್ದು, ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸೆಪ್ಟೆಂಬರ್ 21ರಂದು ಹಂದಿಗನೂರ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡಲೇ ವೇತನ ಪಾವತಿಸುವ ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆಯಲಾಗಿತ್ತು. ಆದರೆ ಭರವಸೆ ಈಡೇರಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ ಕೂಡಲೇ ಬಾಕಿ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನವೆಂಬರ್ ೧೮ರಂದು ಕುಟುಂಬ ಸಮೇತ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮುರುಗೇಂದ್ರ ಹುಣಶ್ಯಾಳ ಎಚ್ಚರಿಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST