LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ನಡುರಸ್ತೆಯಲ್ಲಿ ಬಸ್ ನಿಲ್ಲಿಸುತ್ತಿರುವ ಚಾಲಕರು

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ನಗರದ ಪ್ರಮುಖ ವೃತ್ತಗಳಲ್ಲಿ ಒಂದಾಗಿರುವ ಬಸವೇಶ್ವರ ವೃತ್ತದಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಅದರಲ್ಲೂ ಸಾರಿಗೆ ಬಸ್ ಗಳು ರಸ್ತೆ ಮಧ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದಾರೆ. ಇದರಿಂಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಬಸವೇಶ್ವರ ವೃತ್ತ ಬೃಹದಾಕಾರದಲ್ಲಿದ್ದು, ಯಾವುದೇ ಭಾಗದಲ್ಲಿ ಬ್ಯಾರಿಕೇಡ್ ಗಳಾಗಲಿ, ಡಿವೈಡರ್ ಗಳಾಗಲಿ ಇಲ್ಲ. ಹೀಗಾಗಿ ಸಂಚಾರಿ ನಿಯಮ ಸರಿಯಾಗಿ ಪಾಲನೆಯಾಗದ ಪರಿಣಾಮ ಪದೆಪದೆ ಅಪಘಾತಗಳು ಸಂಭವಿಸುತ್ತಿವೆ.

ತಹಶೀಲ್ದಾರ್ ಕಚೇರಿಯ ಕಾಂಪೌಂಡ್ ಗೆ ಹೊಂದಿಕೊಂಡು ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಬಸ್ ಗಳನ್ನು ನಡುರಸ್ತೆಯಲ್ಲಿ ನಿಲ್ಲಿಸುತ್ತಿರುವುದರಿಂದ ಅಪಘಾತಗಳಿಗೆ ಆಹ್ವಾನ ನೀಡುತ್ತಿದ್ದು, ಸಂಬಂಧಪಟ್ಟವರು ಗಮನ ಹರಿಸಬೇಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST