LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಬೆಂಕಿ ಅನಾಹುತಕ್ಕೆ 6 ಎಕರೆ ಕಬ್ಬು ಭಸ್ಮ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಹೊಲದಲ್ಲಿ ಹಾಯ್ದು ಹೋದ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿದ ಘಟನೆ ಸಿಂದಗಿ ತಾಲೂಕಿನ ಸುಂಗಠಾಣದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಸುಂಗಠಾಣ ಗ್ರಾಮದ ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಎಂಬುವರ 6 ಎಕರೆ ಕಬ್ಬಿನ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡು ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅಷ್ಟರಲ್ಲಿಯೇ ಬಹುತೇಕ ಕಬ್ಬು ಬೆಂಕಿಗೆ ಆಹುತಿ ಆಗಿತ್ತು ಎಂದು ತಿಳಿದು ಬಂದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST