ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಅಕ್ಟೋಬರ್ 26ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಬುಧವಾರ ತಾಲೂಕು ಆಡಳಿತ ಕಚೇರಿ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಹಶೀಲ್ದಾರ್ ಕರೆಪ್ಪ ಬೆಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವುದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ವಿಶೇಷ ಉಪನ್ಯಾಸ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಇಲಾಖೆಯವರು ತಮ್ಮ ತಮ್ಮ ಕಚೇರಿಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಿ, ನಂತರ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು.


