LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಹಿರಿಯ ಸಾಹಿತಿ ಪ.ಗು ಸಿದ್ದಾಪುರಗೆ ಮಕ್ಕಳ ಸಾಹಿತ್ಯ ಭೂಷಣ ಪ್ರಶಸ್ತಿ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣದ ವಿದ್ಯಾಚೇತನ ಪ್ರಕಾಶನವು ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 60 ವರ್ಷ ಮೇಲ್ಪಟ್ಟ ಹಿರಿಯ ಸಾಹಿತಿಗೆ ರಾಜ್ಯ ಮಟ್ಟದ 'ಮಕ್ಕಳ ಸಾಹಿತ್ಯ ಭೂಷಣ' ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. 2025-26ನೇ ಸಾಲಿನ ಈ ಪ್ರಶಸ್ತಿಗೆ ವಿಜಯಪುರ ಜಿಲ್ಲೆ ಕೋಲಾರ ತಾಲೂಕಿನ ಮುಳವಾಡ ಗ್ರಾಮದ ಖ್ಯಾತ ಮಕ್ಕಳ ಸಾಹಿತಿ ಪ.ಗು. ಸಿದ್ದಾಪುರ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ 15000 ರೂಪಾಯಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಜೂನ್ 11ರಂದು ಪಟ್ಟಣದ ಸಾರಂಗಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಾಶಕ, ಮಕ್ಕಳ ಸಾಹಿತಿ ಹ.ಮ.ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST