LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಎರಡು ಬೈಕ್ ಗಳ ಅಪಘಾತ, ಇಬ್ಬರ ಸ್ಥಿತಿ ಗಂಭೀರ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತಾಲೂಕಿನ ಮನ್ನಾಪುರ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಸವಾರ ಅದೃಷ್ಟವಶಾತ್ ಪರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಎಂದು ತಿಳಿದು ಬಂದಿದೆ. ಯಂಕಂಚಿಯಿಂದ ಸಿಂದಗಿ ಕಡೆ ಹೊರಟಿದ್ದ ಬೈಕ್ ಹಾಗೂ ಮನ್ನಾಪುರದಿಂದ ಯಂಕಂಚಿ ಕಡೆ ಹೊರಟಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಸುಂಗಠಾಣ ಹಾಗೂ ಮದಭಾವಿ ಗ್ರಾಮದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್ ಗಾಗಿ ಕಾದರೂ ಬರದೆ ಹೋದಾಗ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

'ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲು ಆಂಬ್ಯುಲೆನ್ಸ್ ದವರಿಗೆ ಫೋನ್ ಮಾಡಿದರೆ ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಒಂದು ಗಂಟೆಗೂ ಹೆಚ್ಚು ಕಾಲ ಗಾಯಾಳುಗಳು ರಸ್ತೆಯಲ್ಲಿ ಬಿದ್ದು ಒದ್ದಾಡಿದರು. ಕೊನೆಗೆ ಅವರನ್ನು ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು. ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ವ್ಯವಸ್ಥೆ ಸರಿಯಾಗಿಲ್ಲದ ಪರಿಣಾಮ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ'. – ಶರಣ ಮನಗೂಳಿ, ಜಯ ಕರ್ನಾಟಕ ಸಂಘಟನೆ ತಾಲೂಕು ಮುಖಂಡರು.

Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST