LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SIR ಕರಡು ಪಟ್ಟಿ ಪ್ರಕಟ: ಕರ್ನಾಟಕದಲ್ಲಿ 1.07 ಕೋಟಿ ಹೆಸರು ಡಿಲೀಟ್

ದೆಹಲಿಯಲ್ಲಿ 47 ಲಕ್ಷಕ್ಕೂ ಹೆಚ್ಚು ಹೆಸರು ಕೈಬಿಡಲಾಗಿದೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ದೆಹಲಿಯಲ್ಲಿ ಎಸ್ಐಆರ್ ಕರಡು ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. 1.45 ಕೋಟಿ ಮತದಾರರಲ್ಲಿ 47 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಅಂದರೆ ಪ್ರತಿ ಮೂವರಲ್ಲಿ ಒಬ್ಬರ ಹೆಸರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಪಟ್ಟಿಯಿಂದ ಹೆಸರು ಬಿಟ್ಟು ಹೋಗಿರುವವರು ಫಾರ್ಮ್ 6ರಲ್ಲಿ ಅರ್ಜಿ ತುಂಬಿ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು ಎಂದು ದೆಹಲಿ ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 29ರ ತನಕ ಆಕ್ಷೇಪಣೆಗಳ ಪರಿಶೀಲನೆ, ವಿಲೇವಾರಿ ಪ್ರಕ್ರಿಯೆ ನಡೆಯಲಿದೆ. ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳನ್ನು ಹೋಲಿಸಿದರೆ ದೆಹಲಿಯಲ್ಲಿ ಕರಡು ಹಂತದಲ್ಲಿಯೇ ಶೇಕಡ 33ರಷ್ಟು ಹೆಸರುಗಳು ಡಿಲೀಟ್ ಆಗಿವೆ. ರಾಷ್ಟ್ರ ರಾಜಧಾನಿಯಾಗಿರುವುದರಿಂದ ಬೇರೆ ಕಡೆಯಿಂದ ಇಲ್ಲಿ ಬಂದು ಹೋಗುವವರ ಸಂಖ್ಯೆ ಹೆಚ್ಚು ಇರುವುದಕ್ಕೆ ಇದಕ್ಕೆ ಕಾರಣವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ 97,53,577 ನೋಂದಾಯಿತ ಮತದಾರರ ಹೆಸರುಗಳನ್ನು ಹೊಂದಿದೆ. 47,56,722 ಹೆಸರುಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಕರ್ನಾಟಕದಲ್ಲಿ 4.46 ಕೋಟಿ ಮತದಾರರ ಪೈಕಿ 1.07 ಕೋಟಿ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈ ಬಿಡಲಾಗಿದೆ. ಆಂಧ್ರದಲ್ಲಿ 44.89 ಲಕ್ಷ ಜನರ ಹೆಸರುಗಳನ್ನು ಕೈ ಬಿಡಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST