ಪ್ರಜಾಸ್ತ್ರ ಸುದ್ದಿ
ಪುರಿ(Puri): ಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟಿದ್ದು, 100 ಜನರು ಗಾಯಗೊಂಡಿದ್ದಾರೆ. ರಥಯಾತ್ರೆ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು, ಈ ವೇಳೆ ಕಾಲ್ತುಳಿತ ನಡೆದಿದೆ. ಉಸಿರಾಟದ ಸಮಸ್ಯೆಗೆ ಒಳಗಾಗಿದ್ದ ವ್ಯಕ್ತಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಮೃತಪಟ್ಟಿದ್ದಾನೆ.
ಕಾಲ್ತುಳಿತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ. ಅಧಿಕಾರಿಗಳು ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದ್ದಾರೆ. ಜನದಟ್ಟಣೆಯನ್ನು ನಿಯಂತ್ರಣ ಮಾಡುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದ್ದು, ಪೊಲೀಸರು ಹೇಳುವ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ. ಗಾಯಾಳುಗಳ ಸ್ಥಿತಿಗತಿ ತಿಳಿದು ಬರಬೇಕಿದೆ.



